ಸಂಪುಟ ದರ್ಜೆಯ ಸ್ಥಾನ ತಿರಸ್ಕರಿಸಿ ಸಿಎಂ ಬೊಮ್ಮಾಯಿಗೆ ಬಿಎಸ್​​ವೈ ಪತ್ರ

ಸಂಪುಟ ದರ್ಜೆಯ ಸ್ಥಾನ ತಿರಸ್ಕರಿಸಿ ಸಿಎಂ ಬೊಮ್ಮಾಯಿಗೆ ಬಿಎಸ್​​ವೈ ಪತ್ರ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ​ಬೊಮ್ಮಾಯಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಮಾಜಿ ಸಿಎಂ ಬಿಎಸ್​​ವೈ, ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ನೂತನವಾಗಿ ಪದಗ್ರಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದಾರೆ. ಆದರೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ನಿನ್ನೆಯಷ್ಟೇ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿತ್ತು. ಸಿಎಂ ಬೊಮ್ಮಾಯಿಯವರ ಸಿಎಂ ಅವಧಿಯವರೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಲಾಗಿತ್ತು. ಅಲ್ಲದೇ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನೂ ಒದಗಿಸಲು ಆದೇಶದಲ್ಲಿ ತಿಳಿಸಲಾಗಿತ್ತು.

blank

Source: newsfirstlive.com Source link