ಆ.8 ರಿಂದ 12 ರವರೆಗೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 8 ರಿಂದ 12 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ : ಇಂದಿರಾ ಕ್ಯಾಂಟೀನ್‍ಗೆ ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ತಪ್ಪೇನು?- ಸುಧಾಕರ್ ಪ್ರಶ್ನೆ

ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ 8 ರಿಂದ 12 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.  ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ.

Source: publictv.in Source link