ಗೋಲ್ಡ್​ ಮೆಡಲಿಸ್ಟ್ ನೀರಜ್ ಚೋಪ್ರಾ ಕನ್ನಡಿಗ ಕೋಚ್​​​ಗೆ ₹10 ಲಕ್ಷ -ಸಚಿವ ನಾರಾಯಣಗೌಡ

ಗೋಲ್ಡ್​ ಮೆಡಲಿಸ್ಟ್ ನೀರಜ್ ಚೋಪ್ರಾ ಕನ್ನಡಿಗ ಕೋಚ್​​​ಗೆ ₹10 ಲಕ್ಷ -ಸಚಿವ ನಾರಾಯಣಗೌಡ

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ಚಿನ್ನದ ಪಕದ ಗೆದ್ದು ಬಂದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರಾ ಅವರಿಗೆ ಕೋಚ್ ಆಗಿದ್ದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಕ್ರೀಡಾ ಸಚಿವ ನಾರಾಯಣಗೌಡ 10 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಟೋಕಿಯೊ ಒಲಿಂಪಿಕ್ ನಲ್ಲಿ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ ಅವರ ಸಾಧನೆ ಹಿಂದಿನ ಶಕ್ತಿಯಾಗಿರುವ ತರಬೇತುದಾರರಾದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದೇನೆ.

ಟೋಕಿಯೋ ಒಲಿಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು  ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಮುಖ್ಯಮಂತ್ರಿಗಳ ಜೊತೆಗೂ ಚರ್ಚಿಸಿದ್ದೇನೆ. ಈ ವೇಳೆ ತರಬೇತುದಾರರಾದ ಕಾಶಿನಾಥ್ ಅವರನ್ನೂ ಸನ್ಮಾನಿಸಲಾಗುವುದು ಎಂದಿದ್ದಾರೆ.

Source: newsfirstlive.com Source link