ನಾಳೆ ನಾಡದೇವತೆ ಚಾಮುಂಡಿ ಬೆಟ್ಟಕ್ಕೆ ಸಿಎಂ ಬೊಮ್ಮಾಯಿ ಭೇಟಿ

ನಾಳೆ ನಾಡದೇವತೆ ಚಾಮುಂಡಿ ಬೆಟ್ಟಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಮೈಸೂರಿಗೆ ಭೇಟಿ ನೀಡಲಿದ್ದು, ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದುಕೊಳ್ಳಲಿದ್ದಾರೆ. ಚಾಮುಂಡಿ ಬೆಟ್ಟದ ಬಳಿಕ ಸಿಎಂ ಸುತ್ತೂರು ಮಠಕ್ಕೆ ಭೇಟಿ ಕೊಡಲಿದ್ದಾರೆ.

blank

ನಾಳೆ ಬೆಳಿಗ್ಗೆ 8 ಗಂಟೆಗೆ ರಸ್ತೆ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿರುವ ಸಿಎಂ 10.30ಕ್ಕೆ ಚಾಮುಂಡಿಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಳಗ್ಗೆ 11.15 ಕ್ಕೆ ಜಿಲ್ಲಾ ಕೋವಿಡ್ ಸಭೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿಗಳು, ಹಿರಿಯ ಆರೋಗ್ಯಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕೋವಿಡ್ ಪರೀಶೀಲನಾ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿರುವ ಸಿಎಂ ಬೊಮ್ಮಾಯಿ ಅವರು, ಸಭೆಯ ನಂತರ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ. ಆ ಬಳಿಕ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Source: newsfirstlive.com Source link