ಸಮುದ್ರದಲ್ಲಿ ಕೊಚ್ಚಿ ಹೋದ ಯುವಕ – ಪೊಲೀಸರಿಂದ ಶೋಧ ಕಾರ್ಯ

ಕಾರವಾರ: ಸಮುದ್ರದಲ್ಲಿ ಈಜಲು ಹೋದ ಯುವಕ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕಡಲ ತೀರದಲ್ಲಿ ನಡೆದಿದೆ.

ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ. ಎಂಟು ಮಂದಿ ಬೆಂಗಳೂರಿನಿಂದ ಗೋಕರ್ಣಕ್ಕೆ ಇಂದು ಮುಂಜಾನೆ ಪ್ರವಾಸಕ್ಕೆ ಬಂದಿದ್ದರು. ಸ್ಥಳೀಯ ಜನರ ಎಚ್ಚರಿಕೆ ನಡುವೆಯೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದರು.

ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಸಮುದ್ರಕ್ಕೆ ಇಳಿದಿದ್ದ ಉಳಿದವರು ಈಜಿ ದಡ ಸೇರಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದಾನೆ.

ಸಮುದ್ರ ಪಾಲಾದ ಈತನ ಪತ್ತೆಗಾಗಿ ಪೊಲೀಸರು ಹಾಗೂ ಲೈಫ್ ಗಾರ್ಡ್ ಗಳು ಶೋಧ ಕಾರ್ಯ ಮುಂದುವರೆಸಿದ್ದು ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನನಗೆ ಪರೀಕ್ಷೆ ಮಾಡಬೇಕು ಅಂತ ಯಾವುದೇ ಹಠ, ಪ್ರತಿಷ್ಠೆ ಇರಲಿಲ್ಲ: ಸುರೇಶ್ ಕುಮಾರ್

Source: publictv.in Source link