2 ವರ್ಷದ ಬಳಿಕ ದರ್ಶನ್, ಅಭಿ ಜೊತೆ ಸುಮಲತಾ ತಿರುಪತಿ ಭೇಟಿ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪುತ್ರ ಅಭಿಷೇಕ್ ಅಂಬರೀಶ್ ಜೊತೆ ತಿರುಪತಿಗೆ ಭೇಟಿ ನೀಡಿದ್ದಾರೆ.

ಈ ಸಂಬಂಧ ತಮ್ಮ ಇನ್ಸ್ ಸ್ಟಾ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿಕೊಂಡು 2 ವರ್ಷಗಳ ಬಳಿಕ ತಿಮ್ಮಪ್ಪನ ದರ್ಶನ ಪಡೆದಿರುವುದಾಗಿ ತಿಳಿಸಿದ್ದಾರೆ.

ಸುಮಾರು 2 ವರ್ಷಗಳ ನಂತರ ತಿರುಪತಿ ವೆಂಕಟೇಶ್ವರ ದೇವರ ದಿವ್ಯ ದರ್ಶನವನ್ನು ಪಡೆದೆ. ನನ್ನ ಹುಡುಗರಾದ ದರ್ಶನ್ ತೂಗುದೀಪ ಶ್ರೀನಿವಾಸ್, ಅಭಿಷೇಕ್ ಅಂಬರೀಶ್ ಮತ್ತು ಸ್ನೇಹಿತರ ಜೊತೆ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಇಲ್ಲಿಗೆ ಬರುವುದೆಂದರೆ ನನಗೆ ತುಂಬಾನೆ ಖುಷಿ ನೀಡುತ್ತದೆ. ಅಲ್ಲದೆ ಇಲ್ಲಿಗೆ ಭೇಟಿ ನೀಡಿದರೆ ಒಂದು ರೀತಿಯಲ್ಲಿ ಮನಸ್ಸಿಗೆ ಶಾಂತಿ ಸಿಗುತ್ತದೆ. ಅಲ್ಲದೆ ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿರುವುದಾಗಿ ಸುಮಲತಾ ಇನ್ ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಂಜನ ಅಪ್ಪ, ಅಮ್ಮನ ಜೊತೆ ಮದುವೆ ಬಗ್ಗೆ ಮಾತನಾಡಿದ್ದೇನೆ: ದಿವ್ಯಾ ಸುರೇಶ್

ಕೆಲ ದಿನಗಳ ಹಿಂದೆ ಕೆಆರ್‍ಎಸ್ ಆಣೆಕಟ್ಟು ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಲೋಕಸಭೆಯಲ್ಲಿ ಸುಮಲತಾ ದನಿ ಎತ್ತಿದ್ದರು. ಕೆಆರ್ ಎಸ್ ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದಕ್ಕಾಗಿ ರಾಸಾಯನಿಕ ಸ್ಫೋಟಕಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲದ ಗುಣಮಟ್ಟ ಕುಸಿದಿದೆ. ಬೆಳೆಗಳ ಮೇಲೆ ಪರಿಣಾಮ ಬೀರಿದೆ. ವಾಯುಮಾಲಿನ್ಯದಿಂದ ಜನರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುಬೇಕು ಎಂದು ಆಗ್ರಹಿಸಿದ್ದರು. ರಾಜಕೀಯ ಜಂಜಾಟಗಳಿಂದ ಮನಸ್ಸಿಗೆ ಶಾಂತಿ ಸಿಗಲೆಂದು ಸಂಸದೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.

Source: publictv.in Source link