‘ಲವ್​ ಯು ರಚ್ಚು’ ಚಿತ್ರೀಕರಣದ ವೇಳೆ ಅವಘಡ; ವಿದ್ಯುತ್ ತಂತಿ ತಗುಲಿ ಫೈಟರ್ ಸಾವು

‘ಲವ್​ ಯು ರಚ್ಚು’ ಚಿತ್ರೀಕರಣದ ವೇಳೆ ಅವಘಡ; ವಿದ್ಯುತ್ ತಂತಿ ತಗುಲಿ ಫೈಟರ್ ಸಾವು

‘ಲವ್​ ಯು ರಚ್ಚು’ ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಫೈಟರ್​​ ಒಬ್ಬರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ವರದಿಯಾಗಿದೆ.

blank

ನ್ಯೂಸ್​ಫಸ್ಟ್​ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ.. ಫೈಟರ್ ಅಸಿಸ್ಟೆಂಟ್ ವಿವೇಕ್ ಅನ್ನೋರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 KV ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಬಿಡದಿಯ ಜೋಗನಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಈ ಬಗ್ಗೆ ನ್ಯೂಸ್​ಫಸ್ಟ್​ ಜೊತೆ ಮಾತನಾಡಿರುವ ನಿರ್ಮಾಪಕ ಗುರು ದೇಶಪಾಂಡೆ.. ಅವಘಡ ನಡೆದಿರೋದು ನಿಜ. ನಾನು ಆ ಸ್ಪಾಟ್​​ನಲ್ಲಿ ಇರಲಿಲ್ಲ. ಈಗ ಸ್ಪಾಟ್​ಗೆ ಹೋಗುತ್ತಿದ್ದೇನೆ. ಯಾರಿಗೆ ಏನಾಯ್ತು ಅನ್ನೋದ್ರ ಬಗ್ಗೆ ತಿಳಿದುಕೊಳ್ತೇನೆ ಅಂತಾ ಹೇಳಿದ್ದಾರೆ. ರಚಿತಾ ರಾಮ್​, ನಟ ಅಜಯ್​ ರಾವ್​ ಅಭಿನಯಿಸುತ್ತಿರುವ ಚಿತ್ರ ಇದಾಗಿದೆ.

Source: newsfirstlive.com Source link