SSLC ಫಲಿತಾಂಶ ಪ್ರಕಟ.. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್.. ಓರ್ವ ಮಾತ್ರ ಫೇಲ್

SSLC ಫಲಿತಾಂಶ ಪ್ರಕಟ.. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್.. ಓರ್ವ ಮಾತ್ರ ಫೇಲ್

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಇಂದು ಮಧ್ಯಾಹ್ನ 3:30 ಗಂಟೆಗೆ ಫಲಿತಾಂಶ ಪ್ರಕಟವಾಗಿದೆ. ಈಗ ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ಅಧಿಕೃತ ಎರಡು ವೆಬ್‌ಸೈಟ್​​ಗಳಲ್ಲಿ ಎಸ್​​ಎಸ್​ಎಲ್​​ಸಿ ಫಲಿತಾಂಶ ನೋಡಬಹುದಾಗಿದೆ.

ಈ ವರ್ಷ 99.09 ಪರ್ಸೆಂಟ್ ರಿಸಲ್ಟ್ ಈ ಬಾರಿ ಬಂದಿದೆ.. ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಿದ್ದಾರೆ.. ಓರ್ವ ಮಾತ್ರ ಬೇರೆಯವರಿಂದ ಪರೀಕ್ಷೆ ಬರೆಸಿದ್ದ ಹೀಗಾಗಿ ಅವನ ಫಲಿತಾಂಶ ತಡೆಹಿಡಿಯಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್​ಗಳಾದ http://kseeb.kar.nic.in ಅಥವಾ karresult.nic.in ಮೇಲೆ ಕ್ಲಿಕ್​​ ಮಾಡಿ ಪರಿಶೀಲನೆ ಮಾಡಬಹುದು.

ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.

Source: newsfirstlive.com Source link