ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ: ಬಿಜೆಪಿ ಕಿಸಾನ್ ಮೋರ್ಚಾದ ಅಧ್ಯಕ್ಷ & ಪತ್ನಿಯ ಭೀಕರ ಕಗ್ಗೊಲೆ 

ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ: ಬಿಜೆಪಿ ಕಿಸಾನ್ ಮೋರ್ಚಾದ ಅಧ್ಯಕ್ಷ & ಪತ್ನಿಯ ಭೀಕರ ಕಗ್ಗೊಲೆ 

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ಮೆರೆದಿದ್ದು, ದಂಪತಿ ಮೇಲೆ ಫೈರಿಂಗ್ ನಡೆಸಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ.

ಅನಂತ್​ನಾಗ್ ಜಿಲ್ಲೆಯ ಲಾಲ್​ಚೌಕ್​​ನಲ್ಲಿದ್ದ ದಂಪತಿ ಮೇಲೆ ಮನಬಂದಂತೆ ಗುಂಡಿನ ಸುರಿಮಳೆಗೈದಿದ್ದಾರೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕುಲ್ಗಂನ ಬಿಜೆಪಿ ಕಿಸಾನ್ ಮೋರ್ಚಾದ ಅಧ್ಯಕ್ಷ ಗುಲಾಂ ರಸೂಲ್ ದರ್​ ಹಾಗೂ ಇವರ ಪತ್ನಿ ಮೇಲೆ ಉಗ್ರರು ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ.

ಉಗ್ರರ ಗುಂಡೇಟಿಗೆ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು.. ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Source: newsfirstlive.com Source link