ಸಂಪುಟದಲ್ಲಿ ಸಿಗದ ಸ್ಥಾನ; ಯೋಗೇಶ್ವರ್ ಬೆನ್ನಲ್ಲೇ ದೆಹಲಿಗೆ ತೆರಳಿದ ರಮೇಶ್ ಜಾರಕಿಹೊಳಿ

ಸಂಪುಟದಲ್ಲಿ ಸಿಗದ ಸ್ಥಾನ; ಯೋಗೇಶ್ವರ್ ಬೆನ್ನಲ್ಲೇ ದೆಹಲಿಗೆ ತೆರಳಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿ.ಪಿ ಯೋಗೇಶ್ವರ್ ಬೆನ್ನಲ್ಲೇ ಮತ್ತೊರ್ವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಳಗಾವಿ ಮೂಲಕ ದೆಹಲಿಗೆ ರಮೇಶ್ ಜಾರಕಿಹೊಳಿ ದೆಹಲಿ ತಲುಪಿದ್ದು ಖಾಸಗಿ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ಹಿರಿಯ ನಾಯಕರನ್ನ ಭೇಟಿಯಾಗುವ ಸಾಧ್ಯತೆ ಇದೆ.

ಯೋಗೇಶ್ವರ್ ಮತ್ತು ಜಾರಕಿಹೊಳಿ ಒಟ್ಟಾಗಿ ವರಿಷ್ಠರ ಭೇಟಿಗೆ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಸರ್ಕಾರ ರಚನೆಯಲ್ಲಿ ಈ ಇಬ್ಬರೂ ನಾಯಕರು ಮಹತ್ವದ ಪಾತ್ರ ನಿರ್ವಹಿಸಿದ್ದರು ಎಂದು ಹೇಳಲಾಗಿತ್ತು. ಸದ್ಯ ಇಬ್ಬರೂ ನಾಯಕರು ಸಂಪುಟದಲ್ಲಿಲ್ಲ.. ಈ ಹಿನ್ನೆಲೆ ರಮೇಶ್ ಜಾರಕಿಹೊಳಿ ಹಾಗೂ ಯೋಗೇಶ್ವರ್ ದೆಹಲಿ ಭೇಟಿ ಪ್ರಾಮುಖ್ಯತೆ ಪಡೆದುಕೊಂಡಿದೆ.

Source: newsfirstlive.com Source link