ಆ.​12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಆ.​12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ಆಗಸ್ಟ್​​ 12ರವರೆಗೆ ಕರಾವಳಿ ಭಾಗದ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಆಗ್ನೇಯ ಅರಬ್ಬಿ ಸಮುದ್ರ, ಕೇರಳ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ದೇಶದ ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಇನ್ನೆರಡು ದಿನ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ನಿರೀಕ್ಷೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ ಎಂದು ಮಾಹಿತಿ ನೀಡಿದ್ದಾರೆ. 

Source: newsfirstlive.com Source link