ಗಾಂಜಾ ಸಾಗಾಟ ಮಾಡ್ತಿದ್ದ ಮೂವರ ಬಂಧನ -2.30 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಗಾಂಜಾ ಸಾಗಾಟ ಮಾಡ್ತಿದ್ದ ಮೂವರ ಬಂಧನ -2.30 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಶಿವಮೊಗ್ಗ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಶಿವಮೊಗ್ಗದಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಭದ್ರಾವತಿ ಕಡೆಗೆ ಗಾಂಜಾ ಸಾಗಾಣಿಕೆ ಮಾಡಲಾಗ್ತಿತ್ತು. ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಗೋಪಿನಾಥ, ಭರತ್, ಸಾಗರ್​ ಎಂಬುವವರನ್ನು ಬಂಧಿಸಿದ್ದಾರೆ.

ಇನ್ನೂ ಆರೋಪಿಗಳಿಂದ ಅಂದಾಜು 2 ಲಕ್ಷ 30 ಸಾವಿರ ಮೌಲ್ಯದ 23 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಕಾರು,ಮತ್ತು ಮೂರು ಮೊಬೈಲ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Source: newsfirstlive.com Source link