ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿಗೆ ಬ್ರೇಕ್.. ಕನ್ನಡ ಪುಸ್ತಕ ನೀಡಲು ಸಿಎಂ ಆದೇಶ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿಗೆ ಬ್ರೇಕ್.. ಕನ್ನಡ ಪುಸ್ತಕ ನೀಡಲು ಸಿಎಂ ಆದೇಶ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ ಹಾಕದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದು, ಆ ಮೂಲಕ ಅನಗತ್ಯ ಖರ್ಚು, ವೆಚ್ಚಕ್ಕೆ ಬ್ರೇಕ್​ ಹಾಕಲು ಮುಂದಾಗಿದ್ದಾರೆ.

ಹಿರಿಯ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದು, ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಹೂ, ಹಣ್ಣು ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಆದೇಶವನ್ನು ಎಲ್ಲಾ ಸರ್ಕಾರಿ ಇಲಾಖೆಗಳು ಪಾಲನೆ ಮಾಡಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.

Source: newsfirstlive.com Source link