ಮನೆ ಕಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಬೆಂಚೆ ಗ್ರಾಮದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಸ್ಥರೇ ಸೇರಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

 

ತಡರಾತ್ರಿ 2.30ರ ಸಮಯದಲ್ಲಿ ಪಲ್ಸರ್ ಬೈಕ್ ನಲ್ಲಿ ಬಂದ ಮೂವರು ಕಳ್ಳರು, ಬೆಂಚೆ ಗೇಟ್ ನಲ್ಲಿ ನೀಲಮ್ಮ ಅವರ ಮನೆಯಲ್ಲಿ ಕಳವು ಮಾಡಿದ್ದಾರೆ. ಬಳಿಕ ದೊಡ್ಡೀರಪ್ಪ ಅವರ ಮನೆಯಲ್ಲಿ ಚಿನ್ನಾಭರಣ ದೋಚಿದ್ದಾರೆ. ಮೂರನೇ ಮನೆಯಲ್ಲಿ ಕಳವು ಮಾಡುತ್ತಿದ್ದಾಗ ಗ್ರಾಮಸ್ಥರೊಬ್ಬರು ಗಮನಿಸಿದ್ದು, ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಾರೆ.

 

ಕೂಡಲೇ ಅಲರ್ಟ್ ಆದ ಗ್ರಾಮಸ್ಥರು, ಸುಮಾರು 100ಕ್ಕೂ ಅಧಿಕ ಜನ ಒಂದೆಡೆ ಸೇರಿ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಗ್ರಾಮಸ್ಥರು ಬರುತ್ತಿರುವುದು ಗೊತ್ತಾಗುತ್ತಿದ್ದಂತೆ ಮೂವರು ಕಳ್ಳರು ಬೈಕ್ ನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಬೆನ್ನಟ್ಟಿದ ಗ್ರಾಮಸ್ಥರು ಬೈಕ್ ಸಮೇತ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಓರ್ವ ತಪ್ಪಿಸಿಕೊಂಡಿದ್ದಾನೆ.

Source: publictv.in Source link