ಕೆ.ಎಸ್​​ ಈಶ್ವರಪ್ಪಗೆ ಸಂಸ್ಕಾರ, ಸಂಸ್ಕೃತಿ ಎರಡು ಇಲ್ಲ; ಮಾಜಿ ಸಿಎಂ ಸಿದ್ದರಾಮಯ್ಯ

ಕೆ.ಎಸ್​​ ಈಶ್ವರಪ್ಪಗೆ ಸಂಸ್ಕಾರ, ಸಂಸ್ಕೃತಿ ಎರಡು ಇಲ್ಲ; ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಈಶ್ವರಪ್ಪ ಆರೋಗ್ಯಕರ ಮನಸ್ಥಿತಿ ಹೊಂದಿಲ್ಲ. ಇವರಿಗೆ ಸಂಸ್ಕಾರ, ಸಂಸ್ಕೃತಿ ಅನ್ನೋದೆ ಇಲ್ಲ ಎಂದು ತಿರುಗೇಟು ನೀಡಿದರು.

ಈಶ್ವರಪ್ಪ ಬಳಸಿದ ಪದ ಯಾರು ಬೇಕಾದರೂ ಬಳಸಬಹುದು. ಸಂಸ್ಕಾರ ಇರುವವರು ಅಂತಹ ಪದ ಬಯಸುವುದಿಲ್ಲ. ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದೆ. ಅವ್ರಿಂದ ಬದಲಾವಣೆಗಳನ್ನು ನಿರೀಕ್ಷೆ ಮಾಡಲೇಬಾರದು‌ ಎಂದರು.

blank

ಆಡಳಿತದಲ್ಲಿರುವವರು ಟೀಕೆಗಳನ್ನ ಆರೋಗ್ಯ ಪೂರ್ಣವಾಗಿ ಸ್ವೀಕರಿಸಬೇಕು. ರಾಜಕಾರಣದಲ್ಲಿ ಟೀಕೆ ಬರುವುದು ಸಹಜ. ಅದಕ್ಕೆ ಈ ರೀತಿ ಪ್ರತಿಕ್ರಿಯೆ ನಿಡೋದು ಸರಿಯಲ್ಲ. ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತ್ನಾಡುತ್ತಿದ್ದಾರೆ. ಅವರಿಗೆ ಆರೋಗ್ಯಕರವಾದ ಸಂಸ್ಕೃತಿಯೇ ಇಲ್ಲ ಎಂದು ಕುಟುಕಿದರು.

ಇದನ್ನೂ ಓದಿ: ಮದ್ದೂರು ವಡೆಗೆ ಮರುಳಾದ ಸಿದ್ದರಾಮಯ್ಯ.. ಮತ್ತೊಮ್ಮೆ ರುಚಿ ಸವಿದ ಮಾಜಿ ಸಿಎಂ

ಮುಂದುವರಿದ ಅವರು, ಬಿಜೆಪಿಯವರ ಸಂಸ್ಕೃತಿಯೇ ಇಂತದ್ದು. ಈಶ್ವರಪ್ಪಗೆ ಬಿಜೆಪಿ ಬುದ್ದಿ ಹೇಳುವ ಕೆಲಸ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Source: newsfirstlive.com Source link