₹45 ಲಕ್ಷ ವೆಚ್ಚದಲ್ಲಿ ವಿಜಯನಗರದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭ ಸ್ಥಾಪನೆ..

₹45 ಲಕ್ಷ ವೆಚ್ಚದಲ್ಲಿ ವಿಜಯನಗರದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭ ಸ್ಥಾಪನೆ..

ವಿಜಯನಗರ: ನೂತನ ಜಿಲ್ಲೆ ವಿಜಯನಗರದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜಿಲ್ಲೆಯ ಹೊಸಪೇಟೆಯ ಜೋಳದರಾಶಿ ಗುಡ್ಡದ ಮೇಲೆ ಧ್ವಜಸ್ತಂಭದ ನಿರ್ಮಾಣ ಮಾಡಲಾಗುತ್ತಿದೆ.

blank

ಈ ಧ್ವಜಸ್ತಂಭ ನಿರ್ಮಾಣಕ್ಕೆ ಸಚಿವ ಆನಂದ್​ಸಿಂಗ್ ವೈಯಕ್ತಿಕವಾಗಿ 45 ಲಕ್ಷ ಹಣವನ್ನು ಖರ್ಚು ಮಾಡುತ್ತಿದ್ದು ಬಜಾಜ್ ಕಂಪನಿ ಈ ಐತಿಹಾಸಿಕ ಧ್ವಜಸ್ತಂಭ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದೆ. ಅಲ್ಲದೇ 45 ಅಡಿ ಎತ್ತರದ ಕೃಷ್ಣ ದೇವರಾಯನ ಕಂಚಿನ ಪ್ರತಿಮೆ ಸ್ಥಾಪನೆಗೂ ಕೂಡ ಸಿದ್ಧತೆ ನಡೆಯುತ್ತಿದೆ. ಇನ್ನು ಜೋಳದ ರಾಶಿ ಗುಡ್ಡವನ್ನ ಪ್ರವಾಸಿತಾಣವಾಗಿಯೂ ಅಭಿವೃದ್ಧಿಪಡಿಸಲು ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಇದೆ.

blank

blank

 

Source: newsfirstlive.com Source link