ಮಧ್ಯಪ್ರದೇಶ ಸಿಎಂ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಧ್ಯಪ್ರದೇಶ ಸಿಎಂ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರು ಪೊಲೀಸರ ವಶಕ್ಕೆ

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕರ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ, ರೈತರ ಮಸೂದೆ ಮತ್ತು ಪೆಗಾಸಸ್ ವಿರುದ್ಧ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

blank

ಯೂತ್ ಕಾಂಗ್ರೆಸ್​​ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಿವಾಸದ ಬಳಿ ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆ ತಡೆಯಲು ಪೊಲೀಸರು ಜಲಫಿರಂಗಿಗಳನ್ನು ಬಳಸಿದ್ದಾರೆ. ಪ್ರತಿಭಟನೆ ತಾರಕ್ಕೇರಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ದೇಶದ ಪ್ರಮುಖ ಪತ್ರಕರ್ತರು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ನೂರಾರು ಜನರ ಮೊಬೈಲ್ ಫೋನ್​ಗಳನ್ನು ಪೆಗಾಸಸ್ ಮೂಲಕ ಟ್ಯಾಪ್ ಮಾಡಲಾಗಿದೆ ಎಂದು ಸ್ವತಂತ್ರ ಸುದ್ದಿಸಂಸ್ಥೆಯೊಂದು ವರದಿ ಮಾಡಿತ್ತು. ಪೆಗಾಸಸ್ ಗೂಢಚರ್ಯೆ ವಿರುದ್ಧ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದರು.

blank

blank

Source: newsfirstlive.com Source link