ಸತೀಶ್​ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಕೇಸ್: ಕೇವಲ 3 ನಿಮಿಷದಲ್ಲಿ ಬೆಂಕಿಯಿಟ್ಟು ದುಷ್ಕರ್ಮಿಗಳು ಎಸ್ಕೇಪ್

ಸತೀಶ್​ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಕೇಸ್: ಕೇವಲ 3 ನಿಮಿಷದಲ್ಲಿ ಬೆಂಕಿಯಿಟ್ಟು ದುಷ್ಕರ್ಮಿಗಳು ಎಸ್ಕೇಪ್

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಗೆ ಸಂಬಂಧಿಸಿದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

blank

ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಮತ್ತು ಪೊಲೀಸ್ ಜಂಟಿ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ.. ರಾತ್ರಿ 1 ಗಂಟೆ ಸುಮಾರಿಗೆ ಕಾರುಗಳಿಗೆ ಬೆಂಕಿ ಬಿದ್ದಿದೆ. ಯಾರು ಬೆಂಕಿ ಹಚ್ಚಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಿದೆ ಎಂದರು.

ಕಿಡಿಗೇಡಿಗಳು ಗೇಟ್ ಹಾರಿ ಬಂದು ಬೆಂಕಿಯನ್ನ ಹಚ್ಚಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿಯನ್ನ ಗಮನಿಸಿ ಗೇಟ್ ಹಾರಿ ದುಷ್ಕೃತ್ಯ ಮೆರೆದಿದ್ದಾರೆ. ರಾತ್ರಿ 1 ಗಂಟೆ 25 ನಿಮಿಷದ ಸುಮಾರಿಗೆ ಘಟನೆ ನಡೆದಿದೆ. ಕೇವಲ ಮೂರು ನಿಮಿಷದಲ್ಲಿ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

Source: newsfirstlive.com Source link