BREAKING: ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಕಾರುಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

BREAKING: ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಕಾರುಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಗೆ ಸಂಬಂಧಿಸಿದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

blank

ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಫಾರ್ಚೂನರ್ ಕಾರು ಸೇರಿದಂತೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

blank

ಮಧ್ಯರಾತ್ರಿ1.30ರ ಸುಮಾರಿಗೆ ನಾಲ್ಕು ಜನ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್​​ಗಳನ್ನ ತಂದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

Source: newsfirstlive.com Source link