ಇಂದಿನಿಂದ ತುಮಕೂರಲ್ಲಿ ದೇವಸ್ಥಾನ, ಪ್ರವಾಸಿತಾಣಗಳು ಬಂದ್

ತುಮಕೂರು: ಕೋವಿಡ್ 19 ಸೋಂಕು ಹರಡುವುದನ್ನು ನಿಯಂತ್ರಿಸುವ ಸಂಬಂಧ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯು ಆಂಧ್ರಪ್ರದೇಶ ರಾಜ್ಯಕ್ಕೆ ಹೊಂದಿಕೊಂಡಿದ್ದು, ಸದರಿ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದೆ. ಹಾಗೂ ಶ್ರಾವಣ ಮಾಸ ಮುಂಬರುವ ಹಬ್ಬಗಳ ಕಾಲವಧಿಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಕೋವಿಡ್ 3ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ನಿಷೇಧ ಇದೆ. ಪ್ರವಾಸಿ ತಾಣಗಳು ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಕಳ್ಳರಿಂದ ಚಿನ್ನ ಖರೀದಿಸಿದ ಆರೋಪ- ಚಿನ್ನದಂಗಡಿ ವ್ಯಾಪಾರಿಯ ಬಂಧನ

Source: publictv.in Source link