ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು

ತುಮಕೂರು: ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಶ್ರೀಧರ್ (25) ಎಂದು ಗುರುತಿಸಲಾಗಿದೆ. ತಿಪಟೂರಿನ ಹುಚ್ಚನಟ್ಟಿ ಚಿಪ್ಪು ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಧರ್, ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ತಮ್ಮ ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಎಚ್.ಬೈರಾಪುರ ಗೇಟ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬೈಕ್ ಚಲಾಯಿಸುತ್ತಿದ್ದ ಶ್ರೀಧರ್, ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಅದೇ ಗ್ರಾಮದ ನಿವಾಸಿ ಮಂಜುನಾಥ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗೆ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೊನ್ನವಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ:ತಂದೆಯಿಂದಲೇ ಮಗನ ಬರ್ಬರ ಹತ್ಯೆ!

Source: publictv.in Source link