ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆ

ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆ

ದಾವಣಗೆರೆ: ಜಿಲ್ಲೆಯ ಬಸವರಾಜ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಸೀಮೆ ಎಣ್ಣೆ ಮಲ್ಲೇಶ್ ಎಂಬುವರ ಅಳಿಯ ಪರಮೇಶ್ ಕೊಲೆಯಾದ ವ್ಯಕ್ತಿ..ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಭೀಕರ ಕೊಲೆಯಿಂದ ದಾವಣಗೆರೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಎಸ್​ಪಿ ರಿಷ್ಯಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Source: newsfirstlive.com Source link