ಮತ್ತೆ ಗಡಿ ಕ್ಯಾತೆ ತೆಗೆದ ಮಹಾ ಡಿಸಿಎಂ..ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯ

ಮತ್ತೆ ಗಡಿ ಕ್ಯಾತೆ ತೆಗೆದ ಮಹಾ ಡಿಸಿಎಂ..ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯ

ಬೆಳಗಾವಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ ತೆಗೆದಿದ್ದು, ಉಭಯ ರಾಜ್ಯಗಳ ಗಡಿ ವಿವಾದ ಇತ್ಯರ್ಥಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸ ಬೇಕೆಂದು ಒತ್ತಾಯ ಮಾಡಿದ್ದಾರೆ.

ಈ ಹಿಂದೆ ಗಡಿ ತಕರಾರು ಕುರಿತು ಎಂಇಎಸ್​ ಪುಂಡರು ಪ್ರಧಾನಿಗೆ ಪತ್ರ ಅಭಿಯಾನ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಮತ್ತೆ ಗಡಿ ತಾಕರಾರೆತ್ತಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿವಾದವನ್ನ ಇತ್ಯರ್ಥ ಪಡಿಸಬೇಕು, ಮತ್ತು ಈ ಗಡಿ ವಿವಾದದಲ್ಲಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕೆಂದು ಅಜಿತ್ ಪವಾರ್ ಪ್ರಧಾನಮಂತ್ರಿ ಮೋದಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ನಿನ್ನೆ ಈಶ್ವರಪ್ಪ.. ಇಂದು ಮತ್ತೊಬ್ಬ ಸಚಿವ; ಕಳಂಕಿತ ಸಚಿವೆ ಜೊಲ್ಲೆ ಪರ ಹೆವಿ ಬ್ಯಾಟಿಂಗ್

ಆಗಸ್ಟ್​ 9 ರಂದು ಪಿಎಂಗೆ ಪತ್ರ ಬರೆದಿರುವ ಡಿಸಿಎಂ ಪವಾರ್​. ಮುಂಬೈ ರಾಜಧಾನಿಯಾಗಿ ಮಹಾರಾಷ್ಟ್ರ ರಾಜ್ಯ ರಚನೆಯಾಗಿ 60 ವರ್ಷಗಳೇ ಕಳೆದಿದೆ. ಕರ್ನಾಟಕದ ಮರಾಠಿ ಭಾಷಿಕ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಸೇರಿಲ್ಲ. ಹೀಗಾಗಿ ಸಂಯುಕ್ತ ಮಹಾರಾಷ್ಟ್ರ ರಚನೆ ಕನಸು ಇನ್ನೂ ಈಡೇರಿಲ್ಲ. ಸಂಯುಕ್ತ ಮಹಾರಾಷ್ಟ್ರ ರಚನೆ ಆಗುವತನಕ ಮಹಾರಾಷ್ಟ್ರ ವಿರಮಿಸುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟದಲ್ಲಿ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿರುವ ಅಜಿತ್ ಪವಾರ್, ಕರ್ನಾಟಕದಲ್ಲಿ ಇರುವ ಮರಾಠಿ ಭಾಷಿಕರಿಗೆ ನ್ಯಾಯ ಸಿಗುತ್ತದೆ ಎಂದಿದ್ದಾರೆ.

Source: newsfirstlive.com Source link