ಮಹೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ – ದಲಿತ ಸಂಘಟನೆಗಳಿಂದ ಪ್ರತಿಭಟನೆ

ಚಾಮರಾಜನಗರ: ಬಿಎಸ್‍ಪಿ ಪಕ್ಷದ ಉಚ್ಛಾಟಿತ ಶಾಸಕ ಎನ್.ಮಹೇಶ್ ಬಿಜೆಪಿ ಸೇರಿಕೊಂಡ ಬೆನ್ನಲ್ಲೇ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆಕೊಡಬೇಕೆಂದು ಆಗ್ರಹಿಸಿ ಚಾಮರಾಜನಗರದಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಬಳಿಯಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಬಿಎಸ್‍ಪಿ ಕಟ್ಟಿ ಮಹೇಶ್‍ರನ್ನು ಶಾಸಕರಾಗಿ ಮಾಡಲು ದುಡಿದ ಸಾವಿರಾರು ದಲಿತ ಯುವಕರಿಗೆ ಮಹೇಶ್ ದ್ರೋಹ ಮಾಡಿದ್ದಾರೆ. ಇದೀಗ ಬಿಜೆಪಿಗೆ ಸೇರಿಕೊಂಡು ತಮ್ಮ ಕ್ಷೇತ್ರದ ಜನರ ನಂಬಿಕೆ ಕಳೆದುಕೊಂಡಿದ್ದಾರೆ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ

ಅಂಬೇಡ್ಕರ್ ಅವರ ಸಿದ್ದಾಂತವನ್ನು ಮುಂದಿಟ್ಟುಕೊಂಡು ಗೆದ್ದ ಮಹೇಶ್, ಸಂವಿಧಾನ ವಿರೋಧಿ ಪಕ್ಷ ಸೇರಿದ್ದಾರೆ. ಆಧುನಿಕ ಜೀತಗಾರಿಕೆಗೆ ನಾಂದಿ ಹಾಡಿದ್ದಾರೆ. ಕೂಡಲೇ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು. ಈ ಸಂದರ್ಭ ದಲಿತ ಸಂಘಟನೆಗಳ ಮಹಿಳಾ ಕಾರ್ಯಕರ್ತರು ಪೊರಕೆ ಹಿಡಿದು ಮೆರವಣಿಗೆಯಲ್ಲಿ ಯಲ್ಲಿ ಪಾಲ್ಗೊಂಡು ಮಹೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Source: publictv.in Source link