ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ದರ್ಶನದ ಬಳಿಕ ಪರ್ಯಾಯ ಶ್ರೀಗಳ ಆಶೀರ್ವಾದವನ್ನೂ ಸಿಎಂ ಪಡೆದಿದ್ದಾರೆ.

ಪರ್ಯಾಯ ಮಠಾಧೀಶರಿಂದ ಮುಖ್ಯಮಂತ್ರಿಗಳಿಗೆ ಗೌರವ ಸಮರ್ಪಣೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವ್ರು, ನಾನೊಬ್ಬ ಶ್ರೀಕೃಷ್ಣನ ಭಕ್ತ, ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ ಅಂತ ಹೇಳಿದ್ದಾರೆ. ಅಲ್ಲದೇ, ಅಪರಾಹ್ನದ ನಂತರ ಎಡೆಬಿಡದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು ಸಿಎಂ ಬೊಮ್ಮಾಯಿ. ಇಂದು, ಉಡುಪಿಯಲ್ಲೇ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಲಿದ್ದಾರೆ.

Source: newsfirstlive.com Source link