BJP ಜೊತೆಗೆ ಟ್ವಿಟ್ಟರ್ ಕೈಜೋಡಿಸಿ ಪ್ರಜಾತಂತ್ರ ಹತ್ತಿಕ್ಕುವ ಕೃತ್ಯದಲ್ಲಿ ತೊಡಗಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಕೆಲ ಮುಖಂಡರ ಖಾತೆಗಳನ್ನು ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರದೊಂದಿಗೆ ಕೈ ಜೋಡಿಸುವ ಮೂಲಕವಾಗಿ ಪ್ರಜಾತಂತ್ರವನ್ನು ಹತ್ತಿಕ್ಕುವ ಕೃತ್ಯದಲ್ಲಿ ಟ್ವಿಟ್ಟರ್ ಭಾಗಿಯಾಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಖಾತೆಗಳನ್ನು ಅಮಾನತು ಮಾಡಿರುವ ಟ್ವಿಟ್ಟರ್ ತನ್ನದೇ ನಿಯಮ ಪಾಲಿಸುತ್ತಿದೆಯಾ? ಅಥವಾ ಮೋದಿ ಸರ್ಕಾರದ ನೀತಿ ಅನುಸರಿಸುತ್ತಿದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ ಸೇರಿದಂತೆ ನಾಯಕರ ಟ್ವಿಟ್ಟರ್ ಖಾತೆ ಬ್ಲಾಕ್

ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿ ಮನೆಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಈ ಕುರಿತು ಬಾಲಕಿಯ ಪೋಷಕರ ಜೊತೆಗಿನ ಚಿತ್ರ ಹಂಚಿಕೊಂಡು ಟ್ವೀಟ್ ಮಾಡಿದ್ದರು. ಇದರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಟ್ವಿಟ್ಟರ್‍ಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯ ಕುರಿತು ಮಾಹಿತಿ ನೀಡಿ ಫೋಕ್ಸೋ ಕಾಯ್ದೆ ಉಲ್ಲಂಘಿಸಿ ಟ್ವೀಟ್ ಮಾಡಿದ್ದಾರೆ ರಾಹುಲ್ ಗಾಂಧಿ ಖಾತೆಯನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಟ್ವಿಟ್ಟರ್ ತಿಳಿಸಿದೆ.

ರಾಹುಲ್ ಗಾಂಧಿ ಖಾತೆ ಸಸ್ಪೆಂಡ್ ಬೆನ್ನಲ್ಲೇ ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಖಾತೆಯೂ ಲಾಕ್ ಆಗಿದೆ. ಹೀಗೆಂದು ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿಡಿರುವ ಕಾಂಗ್ರೆಸ್ ಟ್ವಿಟ್ಟರ್ ಸಂಸ್ಥೆ ವಿರುದ್ಧವಾಗಿ ಕೆಂಡಕಾರಿದೆ.

 

View this post on Instagram

 

A post shared by Congress (@incindia)

ಯಾರೆಲ್ಲ ಖಾತೆ ಬ್ಲಾಕ್?
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ, ಕೆ ಸಿ ವೇಣುಗೋಪಾಲ್, ಅಜಯ್ ಮಕೇನ್, ಪಕ್ಷದ ಸಚೇತಕ ಮಣಿಕ್ಕಮ್ ಠಾಕೋರ್, ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಮತ್ತು ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಟ್ವಿಟ್ಟರ್ ಖಾತೆಗಳನ್ನು ಸಹ ಬ್ಲಾಕ್ ಮಾಡಲಾಗಿದೆ.

Source: publictv.in Source link