ದುನಿಯಾ ವಿಜಿ​ ಫ್ಯಾನ್ಸ್​ಗೆ ಬ್ಯಾಡ್​​ನ್ಯೂಸ್​​ -ವರಮಹಾಲಕ್ಷ್ಮಿ ಹಬ್ಬಕ್ಕೆ ರಿಲೀಸ್​ ಆಗಲ್ಲ ‘ಸಲಗ’!

ದುನಿಯಾ ವಿಜಿ​ ಫ್ಯಾನ್ಸ್​ಗೆ ಬ್ಯಾಡ್​​ನ್ಯೂಸ್​​ -ವರಮಹಾಲಕ್ಷ್ಮಿ ಹಬ್ಬಕ್ಕೆ ರಿಲೀಸ್​ ಆಗಲ್ಲ ‘ಸಲಗ’!

ದುನಿಯಾ ವಿಜಯ್​ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಸಲಗ’ ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆಯಾಗಲಿದೆ ಎಂದು ಕುತೂಹಲದಿಂದ ಕಾಯುತ್ತಿದ್ದ ಚಿತ್ರಪ್ರೇಮಿಗಳಿಗೆ ನಿರಾಸೆಯಾಗಿದ್ದು, ಸಿನಿಮಾ ಬಿಡುಗಡೆಯ ದಿನಾಂಕ ಮುಂದೂಡಲಾಗಿದೆ ಎಂದು ಚಿತ್ರತಂಡ ನ್ಯೂಸ್​ಫಸ್ಟ್​ಗೆ ಮಾಹಿತಿ ನೀಡಿದೆ.

blank

ಈ ಕುರಿತು ಮಾಹಿತಿ ನೀಡಿರುವ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ವರಮಹಾಲಕ್ಷ್ಮಿ ಹಬ್ಬಕ್ಕೆ ಬಹು ನಿರೀಕ್ಷಿತ ಸಲಗ ಚಿತ್ರ ರಿಲೀಸ್ ಆಗಲ್ಲ ಎಂದು ಹೇಳಿದ್ದಾರೆ. ‘ಸಲಗ’ ಸಿನಿಮಾ ದುನಿಯಾ ವಿಜಯ್ ನಿರ್ದೇಶನದ ಮೊದಲ ಸಿನಿಮಾ ಆಗಿದ್ದು, ಈ ಹಿಂದೆ ಸಲಗ ಚಿತ್ರ ತಂಡ ಆಗಸ್ಟ್ 20 ವರಮಹಾಲಕ್ಷ್ಮಿ ಹಬಕ್ಕೆ ರಿಲೀಸ್ ಮಾಡುವುದಾಗಿ ಹೇಳಿತ್ತು. ಆದರೆ ಸರ್ಕಾರದ ಚಿತ್ರಮಂದಿರಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡದ ಹಿನ್ನೆಲೆ ರಿಲೀಸ್ ಡೇಟ್ ಮುಂದೂಡಿರುವುದಾಗಿ ಚಿತ್ರತಂಡ ಹೇಳಿದೆ.

blank

ಮುಖ್ಯಮಂತ್ರಿಗಳು ಸೆಪ್ಟೆಂಬರ್ 2 ವರೆಗೂ ಕಾಯುವಂತೆ ಸಿಎಂ ಸೂಚಿಸಿದ್ದು, ಕೋವಿಡ್ ಟಾಸ್ಕ್ ಫೋರ್ಸ್​ ಜೊತೆ ಮಾತನಾಡಿ ಸೆ.2 ನಂತರ ಈ ಬಗ್ಗೆ ಹೇಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ನಂತರ ‘ಸಲಗ’ ರಿಲೀಸ್ ದಿನಾಂಕ ನಿರ್ಧಾರ ಮಾಡುವುದಾಗಿ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ತಿಳಿಸಿದ್ದಾರೆ. ಸದ್ಯ ಚಿತ್ರಮಂದಿರಗಳಿಗೆ ಶೇ.50ರಷ್ಟು ಭರ್ತಿಗೆ ಅವಕಾಶವಿದೆ. ಕಳೆದ ಬುಧವಾರ ವಾಣಿಜ್ಯ ಮಂಡಳಿ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ಶೇ.100 ಭರ್ತಿಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಶೇ.100 ಭರ್ತಿಗೆ ಅವಕಾಶ ಸಿಕ್ಕ ನಂತರ ಸಲಗ ರಿಲೀಸ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

Source: newsfirstlive.com Source link