ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ

ಧಾರವಾಡ: ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ನಗರದ ರಾಜೀವಗಾಂಧಿ ನಗರದಲ್ಲಿ ನಡೆದಿದೆ.

ಗಣೇಶ ಬಳ್ಳಾರಿ ಪತ್ನಿ ಶಿಲ್ಪಾಳನ್ನು ಕೊಲೆ ಮಾಡಿದ್ದಾನೆ. ಪತಿ ಗಣೇಶ ಮಂಜುಳಾ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಪತಿ ಪತ್ನಿಯ ಜೊತೆ ಜಗಳ ಅತಿರೇಕಕ್ಕೆ ತಿರುಗಿ, ಪತಿ ಗಣೇಶ ಸಲಾಕೆಯಿಂದ ಪತ್ನಿಯ ತಲೆಗೆ ಹೊಡೆದಿದ್ದಾನೆ. ಶಿಲ್ಪಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಗಣೇಶ ಅಲ್ಲಿಂದ ಪರಾರಿಯಾಗಿದ್ದ.

ಕೊಲೆ ನಡೆದ ವಿಷಯ ಯಾರಿಗೂ ಗೊತ್ತಿರಲಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಶವವನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿ ತನಿಖೆ ಕೈಗೊಂಡಿದ್ದರು. ನಂತರ ಪತಿ ಗಣೇಶನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಗಣೇಶನ ಜೊತೆಯಲ್ಲಿ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಸಹ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಕೊಲೆಗೆ ಬಳಸಿದ್ದ ಸಲಾಕೆಯನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆಸಿದ್ದು, ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: publictv.in Source link