ಚಾಮರಾಜನಗರ ದುರಂತ: 13 ಮೃತ ಸಂತ್ರಸ್ತರ ಕುಟುಂಬಗಳಿಗೆ ತಲಾ 3 ಲಕ್ಷ ಹೆಚ್ಚುವರಿ ಪರಿಹಾರ

ಚಾಮರಾಜನಗರ ದುರಂತ: 13 ಮೃತ ಸಂತ್ರಸ್ತರ ಕುಟುಂಬಗಳಿಗೆ ತಲಾ 3 ಲಕ್ಷ ಹೆಚ್ಚುವರಿ ಪರಿಹಾರ

ಚಾಮರಾಜಗರ: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ 24 ಜನರ ಪೈಕಿ 13 ಜನರಿಗೆ ತಲಾ 3 ಲಕ್ಷ ಪರಿಹಾರ ನೀಡಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ರಾಜ್ಯ ಸರ್ಕಾರ 13 ಜನರಿಗೆ 3 ಲಕ್ಷ ರೂಪಾಯಿ ಹೆಚ್ಚುವರಿ ಪರಿಹಾರ ನೀಡಿದೆ.

ಈ ಹಿಂದೆಯೇ ಸಾವನ್ನಪ್ಪಿದ 24 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗಿತ್ತು. ಆದರೀಗ, 13 ಮಂದಿ ಮೃತ ಕುಟುಂಬಸ್ಥರ ಬ್ಯಾಂಕ್​​ ಖಾತೆಗೆ 3 ಲಕ್ಷ ರೂಪಾಯಿ ಅನ್ನು ಆನ್​​ಲೈನ್​​ ಮೂಲಕ ಜಮಾ ಮಾಡಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ಮಾಹಿತಿ ನೀಡಿದ್ದಾರೆ.

ಇನ್ನು, ಎರಡು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತಕ್ಕೆ ಆಕ್ಸಿಜನ್ ಕೊರತೆ ಕಾರಣವಾಗಿತ್ತು. ಮೇ 2ರ ರಾತ್ರಿ 11ರಿಂದ ಮೇ 3ರ ಬೆಳಗ್ಗಿನ ಜಾವದವರೆಗೆ ಆಕ್ಸಿಜನ್ ಇರಲಿಲ್ಲ. ಜಿಲ್ಲಾಸ್ಪತ್ರೆಯ ದಾಖಲೆಯ ಪ್ರಕಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇರಲಿಲ್ಲ. ಇತ್ತ ಮೂವರಷ್ಟೇ ಆಕ್ಸಿಜನ್ ಇಲ್ಲದೇ ಮೃತಪಟ್ಟಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದ್ದರು. ಆದರೆ 24 ಮಂದಿ ಸಾವಿಗೂ ಆಕ್ಸಿಜನ್ ಕೊರತೆ ಕಾರಣ ಎನ್ನಲಾಗಿದೆ.

Source: newsfirstlive.com Source link