ನಾನು ಆರ್​​ಎಸ್​​ಎಸ್​​ ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ -ಸಿ.ಟಿ ರವಿ

ನಾನು ಆರ್​​ಎಸ್​​ಎಸ್​​ ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ -ಸಿ.ಟಿ ರವಿ

ಚಿಕ್ಕಮಗಳೂರು: ಇಂದಿರಾ ಕ್ಯಾಂಟೀನ್​ ಹೆಸರು ಬದಲಾವಣೆ ಕುರಿತಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ನೀಡಿದ್ದ ತಮ್ಮ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧದ ಟೀಕೆಗಳಿಗೆ ತಿರುಗೇಟು ನೀಡಿ, ನಾನು ಆರ್​​ಎಸ್​​ಎಸ್​​ ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ ಅವರು, ಹುಕ್ಕಾ ಬಾರಿನ ಬಗ್ಗೆ ಮಾತನಾಡಿದ್ದಕ್ಕೆ ಉರಿ ಹತ್ತಿಕೊಂಡು ಮಾತನಾಡ್ತಿದ್ದಾರೆ. ನೆಹರೂ ಹುಕ್ಕಾ ಸೇದುತ್ತಿದ್ದದ್ದು ತಪ್ಪೋ, ರವಿ ಹೇಳಿದ್ದು ತಪ್ಪೋ? ರವಿ ಹೇಳಿದ್ದು ತಪ್ಪು ಅನ್ನುವುದಾದ್ರೆ ಅವರಿಗೆ ನೆಹರೂ ಬಗ್ಗೆ ಇನ್ನೆಷ್ಟು ಆಕ್ರೋಶ ಇರಬಹುದು ಎಂದು ಪ್ರಶ್ನೆ ಮಾಡಿದರು.
ನೆಹರೂ ಹುಕ್ಕಾ ಸೇದುವ ನೂರಾರು ಫೋಟೋಗಳಿವೆ. ನನ್ನ ಮೇಲೆ ಇಷ್ಟು ದ್ವೇಷ ಇದೆ, ಕಾಂಗ್ರೆಸ್ಸಿಗರಿಗೆ ನೆಹರೂ ಬಗ್ಗೆ ಎಷ್ಟು ದ್ವೇಷ ಇರಬಹುದು? ನೆಹರೂ, ಇಂದಿರಾ ಬಗ್ಗೆ ನಾನು ಮಾತನಾಡಿದ್ದು ತಪ್ಪು ಅನ್ನುತ್ತಿದ್ದಾರೆ. ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ ಇಂದಿರಾ ಬಗ್ಗೆ ಮಾತನಾಡಿರುವುದು ನೆನಪು ಮಾಡಬೇಕಾ..? ಇಬ್ರಾಹಿಂ, ಇಂದಿರಾ ಗಾಂಧಿಯನ್ನ ಏನೆಂದು ಕರೆದಿದ್ರು ಅಂತಾ ಗೊತ್ತಿದೆ. ಆದರೆ ನಾನು ಆ ಮಟ್ಟಕ್ಕೆ ಇಳಿದಿಲ್ಲ. ನನಗೆ ಕುಡಿಯೋ ಅಭ್ಯಾಸವಿಲ್ಲ, ಅದ್ರು ಕುಟುಕನ ಪಟ್ಟ ಕಟ್ಟಿದ್ರು, ಅದು ದಿನಾ ಕುಡಿಯುವವರು ಅವರೇ ಮಾಡಿದ್ರು. ನಾನು ಬೆಳಗ್ಗೆ 5 ಗಂಟೆಗೆ ಎದ್ದು ಯೋಗ ಮಾಡ್ತೀನಿ, ಇಡೀ ದಿನ ಸಕ್ರೀಯವಾಗಿರ್ತೀನಿ. ಅವರ ಹಳೇ ಕಥೆಗಳನ್ನ ಹೇಳಬೇಕಾ..? ನಾನು ಆರ್.ಎಸ್.ಎಸ್. ಸ್ವಯಂ ಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ ಎಂದು ಟಾಂಗ್​ ಕೊಟ್ಟರು.

Source: newsfirstlive.com Source link