ನಿನ್ನೆ ಒಂದೇ ದಿನ ರಾಜ್ಯದಲ್ಲಿ 1669 ಕೇಸ್​; ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್​ ಜಾರಿ..?

ನಿನ್ನೆ ಒಂದೇ ದಿನ ರಾಜ್ಯದಲ್ಲಿ 1669 ಕೇಸ್​; ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್​ ಜಾರಿ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಹಿನ್ನೆಲೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್​ ಸಭೆ ನಡೆಯಲಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ‌.ರವಿಕುಮಾರ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿ ಹಲವು ಸಚಿವರು ಭಾಗಿಯಾಗಲಿದ್ದಾರೆ. ಈಗಾಗಲೇ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಹಿನ್ನೆಲೆ ಗಡಿಗಳಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

Image

ಇದನ್ನೂ ಓದಿ: ಮೊಹರಂ ಹಬ್ಬಕ್ಕೆ ಪ್ರತ್ಯೇಕ ಮಾರ್ಗಸೂಚಿ ರಿಲೀಸ್.. ಯಾವುದಕ್ಕೆಲ್ಲಾ ನಿರ್ಬಂಧ..?

ಏರುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ ಮತ್ತಷ್ಟು ಕಠಿಣ ರೂಲ್ಸ್​​ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯೋ ಸಾಧ್ಯತೆ ಇದೆ. ಅಂದ್ಹಾಗೆ ನಿನ್ನೆ ಒಂದೇ ದಿನ ರಾಜ್ಯದಲ್ಲಿ 1669 ಪ್ರಕರಣಗಳು ದಾಖಲಾಗಿವೆ. ಕಳೆದ 15 ದಿನಗಳಿಂದ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇನ್ನು 22 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಅಲ್ಲದೇ 1672 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಹೋಗಿದ್ದಾರೆ.

ಇದನ್ನೂ ಓದಿ: ಚಪ್ಪರ.. ಪೆಂಡಾಲ್.. ಶಾಮಿಯಾನ ವೇದಿಕೆಗಳಲ್ಲಿ ಗಣೇಶ ಕೂರಿಸುವಂತಿಲ್ಲ-ಹೊಸ ಗೈಡ್​ಲೈನ್ಸ್ ರಿಲೀಸ್

ಇದನ್ನೂ ಓದಿ: ಕೊರೊನಾ ಕರಿಛಾಯೆ: ದೇಶದಲ್ಲಿ ನಿನ್ನೆ 41,195 ಮಂದಿಗೆ ಪಾಸಿಟಿವ್ ; ರಾಜ್ಯದಲ್ಲೂ 1,857 ಕೇಸ್​!

Source: newsfirstlive.com Source link