ದಕ್ಷಿಣ ಭಾರತದ ಸಿನಿಮಾಗಳತ್ತ ಮುಖ ಮಾಡಿದ ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ನಟ ಸಲ್ಮಾನ್ ಖಾನ್ ದಕ್ಷಿಣ ಭಾರತದ ಎರಡು ಸಿನಿಮಾಗಳಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈಗಾಗಲೇ ಬಾಲಿವುಡ್‍ನ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಸಲ್ಮಾನ್ ಖಾನ್, ಈ ಮಧ್ಯೆ ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್‍ನಲ್ಲಿ ಸಲ್ಮಾನ್ ಖಾನ್‍ಗೆ ಅಪಾರ ಅಭಿಮಾನಿ ಬಳಗವಿದೆ. ಸಲ್ಮಾನ್ ಯಾವುದೇ ಚಿತ್ರದಲ್ಲಿ ಅಭಿನಯಿಸಿದರೂ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಲ್ಲದೇ ಸಲ್ಮಾನ್ ಚಿತ್ರಗಳಿಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಈ ನಡುವೆ ಸಲ್ಮಾನ್ ಖಾನ್ ತೆಲುಗು ಹಾಗೂ ತಮಿಳು ಚಿತ್ರರಂಗದತ್ತ ಮುಖಮಾಡಿದ್ದಾರೆ. ಟಾಲಿವುಡ್ ನಟ ಚಿರಂಜೀವಿ ಅಭಿನಯದ 153ನೇ ಸಿನಿಮಾದಲ್ಲಿ ಸಲ್ಮಾನ್ ಖಾನ್ ನಟಿಸುತ್ತಿರುವುದು ಬಹುತೇಕ ಪಕ್ಕಾ ಆಗಿದೆ. ಅಲ್ಲದೇ ಈ ಸಿನಿಮಾ ಮಲಯಾಳಂನ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು, ಇದೊಂದು ಮಾಫಿಯಾ ಹಾಗೂ ಕುಟುಂಬ ಪ್ರೇಮ ಕಥಾಹಂದರ ಸಿನಿಮಾವಾಗಿದೆ. ಈ ಚಿತ್ರದಲ್ಲಿ ನಟ ಮೋಹನ್ ಲಾಲ್ ಹಾಗೂ ಪೃಥ್ವಿರಾಜ್ ಅಭಿನಯಿಸಿದ್ದು, ತೆಲುಗಿನಲ್ಲಿ ಮೋಹನ್‍ಲಾಲ್ ಪಾತ್ರದಲ್ಲಿ ಚಿರಂಜೀವಿ ಕಾಣಿಸಿಕೊಳ್ಳುತ್ತಿದ್ದು, ಪೃಥ್ವಿರಾಜ್ ಪಾತ್ರದಲ್ಲಿ ಸಲ್ಮಾನ್ ಖಾನ್ ಅಭಿನಯಿಸಲಿದ್ದಾರೆ. ಒಟ್ಟಾರೆ ಈ ಸಿನಿಮಾದಲ್ಲಿ ಚಿರಂಜೀವಿ ಬಲಗೈ ಭಂಟನಾಗಿ ಸಲ್ಮಾನ್ ಖಾನ್ ಇದೇ ಮೊದಲ ಬಾರಿಗೆ ತೆಲುಗಿನಲ್ಲಿ ಬಣ್ಣಹಚ್ಚಲಿದ್ದಾರೆ.

blank

ಕಾಲಿವುಡ್ ಇಳಯ ದಳಪತಿ ನಟ ವಿಜಯ್ ಅಭಿನಯದ ಬೀಸ್ಟ್ ಸಿನಿಮಾದಲ್ಲಿ ಕೂಡ ಸಲ್ಮಾನ್ ಖಾನ್ ಅಥಿತಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಸಲ್ಮಾನ್ ಖಾನ್‍ರ ಮುಂದಿನ ಸಿನಿಮಾದಲ್ಲಿ ವಿಜಯ್ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಿದ್ದಾರೆ ಎಂಬ ಸುದ್ದಿ ಬಾಲಿವುಡ್ ಸಿನಿ ಅಂಗಳದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್ – ಅಭಿಮಾನಿಗಳು ಕ್ಲೀನ್ ಬೋಲ್ಡ್

Source: publictv.in Source link