8 ಜಿಲ್ಲೆಗಳಲ್ಲಿ ವೀಕೆಂಡ್​ ಕರ್ಫ್ಯೂ; ದೇವಸ್ಥಾನ, ಪ್ರವಾಸಿ ಮಂದಿರಗಳು ಕ್ಲೋಸ್

8 ಜಿಲ್ಲೆಗಳಲ್ಲಿ ವೀಕೆಂಡ್​ ಕರ್ಫ್ಯೂ; ದೇವಸ್ಥಾನ, ಪ್ರವಾಸಿ ಮಂದಿರಗಳು ಕ್ಲೋಸ್

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಪ್ರಮುಖ 8 ಜಿಲ್ಲೆಗಳಿಗೆ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ವಿಜಯಪುರ, ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಇದೀಗ ತುಮಕೂರು, ಕೋಲಾರ ಜಿಲ್ಲಾಡಳಿತವೂ ಸಹ ಮಿನಿ ವೀಕೆಂಡ್​ ಲಾಕ್​ಡೌನ್​ ಘೋಷಣೆ ಮಾಡಿವೆ. ಪ್ರಮುಖ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ ಹೇರಿವೆ.

blank

ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಆರ್ಭಟ ಹಿನ್ನೆಲೆ ಜಿಲ್ಲೆಯ ಗಡಿಭಾಗದ ಚೆಕ್​ಪೋಸ್ಟ್​ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಹಿಂದೆ ಜಿಲ್ಲೆಯಲ್ಲಿ ಕಳೆದ ವಾರ ವೀಕೆಂಡ್ ಕರ್ಫ್ಯೂ ಹೇರಲಾಗಿದ್ದು, ಈ ವಾರವೂ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ತಿಳಿಸಿದೆ.

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಿಗೆ ಇಂದು ಮತ್ತು ನಾಳೆ ಪ್ರವಾಸಿಗರ ಪ್ರವೇಶ ನಿಷೇಧ ಹೇರಲಾಗಿದೆ. ಸುಪ್ರಸಿದ್ಧ ಮಹದೇಶ್ವರ ಬೆಟ್ಟ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳಿಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ : ಚಾಮರಾಜನಗರ ದುರಂತ: 13 ಮೃತ ಸಂತ್ರಸ್ತರ ಕುಟುಂಬಗಳಿಗೆ ತಲಾ 3 ಲಕ್ಷ ಹೆಚ್ಚುವರಿ ಪರಿಹಾರ

blank

ಅಗತ್ಯ ವಸ್ತು ಸೇವೆಗಳಡಿಯಲ್ಲಿ ಮುಂಜಾನೆ 6 ರಿಂದ ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳ ಖರೀದಿ ಹಾಗು ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಮಧ್ಯಾಹ್ನ 2 ರವರೆಗೆ ಪಾರ್ಸೆಲ್​ಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಎಂದಿನಂತೆ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್​ ಮಾಡುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ನೀಡಿದೆ.

Source: newsfirstlive.com Source link