ಸದ್ಯಕ್ಕೆ ಬಸ್ ದರ ಏರಿಕೆ ಇಲ್ಲ: ಶ್ರೀರಾಮುಲು

ಬಳ್ಳಾರಿ: ಸದ್ಯಕ್ಕೆ ಬಸ್ ದರ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ

ನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದ ಅವರು, ಸದ್ಯ ಇಂಧನ ಬೆಲೆ ಏರಿಕೆ ಗಮನದಲ್ಲಿದೆ. ಆದರೆ ಕೊರೊನಾ ಕಾರಣದಿಂದ ಜನರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಯಾವುದೇ ರೀತಿಯ ಹೊರೆಯಾಗದಂತ ತೀರ್ಮಾನ ನಮ್ಮ ಸರಕಾರದ್ದು ಎಂದು ಅವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಿಲ್ಲೆಗಳಲ್ಲಿ ಶಾಲೆ, ಕಾಲೇಜ್ ಆರಂಭಕ್ಕೆ ಗ್ರೀನ್‍ಸಿಗ್ನಲ್ – ಎಲ್ಲಿ ಓಪನ್? ಎಲ್ಲಿ ಕೋಸ್?

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಹಳೆ ವಾಹನ ಗುಜರಿ ನೀತಿ ತುಂಬಾ ಚೆನ್ನಾಗಿದೆ ಎಂದರು. ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರಿಂದ ಅವರನ್ನೇ ಗುರಿಯಾಗಿಸಿಕೊಂಡು ಬೇರೆ ಬೇರೆ ಕಡೆ ವರ್ಗಾವಣೆ ಮಾಡಲಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಶ್ರೀರಾಮುಲು ಅವರು ಪರಿಶೀಲನೆ ನಡೆಸಲಾಗುವುದು ಮತ್ತು ಅವರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

Source: publictv.in Source link