ಹೈಟಿಯಲ್ಲಿ ಪ್ರಬಲ ಭೂಕಂಪಕ್ಕೆ 304 ಬಲಿ

ಪೋರ್ಟ್-ಔ-ಪ್ರಿನ್ಸ್: ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದ್ದು, ನೋಡನೋಡುತ್ತಿದ್ದಂತೆಯೇ ನೂರಾರು ಕಟ್ಟಡಗಳು ಸಂಪೂರ್ಣ ನೆಲಸಮವಾಗಿವೆ. ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪವಾಗ್ತಿದ್ದಂತೆಯೇ ಎಲ್ಲರೂ ತಮ್ಮ ತಮ್ಮ ಮನೆಗಳನ್ನ ಬಿಟ್ಟು ಹೊರಗೆ ಓಡೋಡಿ ಬಂದಿದ್ದಾರೆ. ಆದರೆ ಮನೆಯಲ್ಲೇ ಇದ್ದವರು ಅವಶೇಷಗಳಡಿ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.

ನೂರಾರು ಮಂದಿ ಭೂಕಂಪಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇನ್ನು ಭೂಕಂಪದಿಂದ ಹೈಟಿಯಲ್ಲಿ ತರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Source: publictv.in Source link