ಧ್ವಜಸ್ತಂಭ ನಿಲ್ಲಿಸೋ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಶಾಕ್​​ -ಓರ್ವ ಸಾವು

ಧ್ವಜಸ್ತಂಭ ನಿಲ್ಲಿಸೋ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಶಾಕ್​​ -ಓರ್ವ ಸಾವು

ತುಮಕೂರು: ಧ್ವಜಸ್ತಂಭ ನಿಲ್ಲಿಸೋ ವೇಳೆ ವಿದ್ಯುತ್ ಶಾಕ್​​ ತಗುಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಶಶಾಂಕ್ (16), ಪವನ್ (22), ಚಂದನ್ (16) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನ್​ನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದನ್ ಸಾವನ್ನಪ್ಪಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋಗಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source: newsfirstlive.com Source link