ಸಿಎಂಗೆ ಬೆಳ್ಳಿ ಗದೆ ನೀಡಿ ಅದ್ಧೂರಿ ಸ್ವಾಗತ ಕೋರಿದ ಸಚಿವ ಎಂಟಿಬಿ

ಸಿಎಂಗೆ ಬೆಳ್ಳಿ ಗದೆ ನೀಡಿ ಅದ್ಧೂರಿ ಸ್ವಾಗತ ಕೋರಿದ ಸಚಿವ ಎಂಟಿಬಿ

ಬೆಂಗಳೂರು: ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಜಯಂತೋತ್ಸವ ಅಂಗವಾಗಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಚಿವ ಎಂಟಿಬಿ ನಾಗರಾಜ್​ ಬೆಳ್ಳಿ ಗದೆ ನೀಡುವ ಮೂಲಕ ಅದ್ಧೂರಿ ಸ್ವಾಗತ ಕೋರಿದ್ದಾರೆ.

ನಗರದ ಎನ್.ಆರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಸಂಗೊಳ್ಳಿ ರಾಯಣ್ಣನ 224 ಜಯಂತೋತ್ಸವ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಬಸವರಾಜ ಬೊಮ್ಮಾಯಿ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಬಳಿಕ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ.

blank

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಜನ್ಮ ದಿನ, ಹುತಾತ್ಮರ ದಿನ ಆಚರಣೆಗೆ ರಾಜ್ಯ ಸರ್ಕಾರದ ಆದೇಶ

ಈ ವೇಳೆ ರಾಯಣ್ಣನ ಹುಟ್ಟಿದ ದಿನವಾದ ಆಗಸ್ಟ್​ 15 ಮತ್ತು ಹುತಾತ್ಮರಾದ ಜನೇವರಿ 26 ರನ್ನು ಸರ್ಕಾರಿ ಗೌರವಗಳೊಂದಿಗೆ ಆಚರಿಸಿಲು ಆದೇಶ ನೀಡಿದ್ದಕ್ಕೆ ಬೊಮ್ಮಾಯಿಯವರನ್ನು ಅಭಿನಂದಿಸಲಾಯಿತು. ನಿರಂಜನಾನಂದ ಪುರಿ ಸ್ವಾಮೀಜಿ ಸಿಎಂ ಬಸವರಾಜ ಬೊಮ್ಮಾಯಿ‌ಗೆ ಕಂಬಳಿ ಹೊದಿಸಿ ಸನ್ಮಾನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ‌ಸಚಿವ ಆರ್.ಅಶೋಕ್ ಹಾಗೂ ದಿನೇಶ್ ಗುಂಡೂರಾವ್ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದರು.

Source: newsfirstlive.com Source link