ಮನಸ್ಸಿನಲ್ಲಿ ಸ್ವಾತಂತ್ರ್ಯವಿರಲಿ, ಪದಗಳಲ್ಲಿ ನಂಬಿಕೆಯಿರಲಿ: ಯಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಯಶ್ ಸ್ವಾತಂತ್ರ್ಯ ದಿನಾಚರಣೆಗೆ ಅಭಿಮಾನಿಗಳಿಗಾಗಿ ವಿಶೇಷ ಸಂದೇಶವಸನ್ನು ಕೊಟ್ಟಿದ್ದಾರೆ.

ಮನಸ್ಸಿನಲ್ಲಿ ಸ್ವಾತಂತ್ರ್ಯವಿರಲಿ, ಪದಗಳಲ್ಲಿ ನಂಬಿಕೆಯಿರಲಿ, ನಮ್ಮ ಆತ್ಮದ ಕುರಿತು ಹೆಮ್ಮೆಯಿರಲಿ ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಎಲ್ಲರೂ ದೇಶಕ್ಕೆ ನಮಿಸೋಣ ಎಂದು ಬರೆದುಕೊಂಡು ಒಂದು ಫೋಟೋವನ್ನು ಟ್ವೀಟ್ ಮಾಡಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ್ದಾರೆ.

ಸ್ವಾತಂತ್ರ್ಯ ತಂದುಕೊಟ್ಟ ಧೀರ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ದೇಶದ ಘನತೆಯನ್ನು ಉತ್ತುಂಗಕ್ಕೇರಿಸಿದ ಮಹನೀಯರಿಗೆ ವಂದನೆಗಳನ್ನು ಸಲ್ಲಿಸುತ್ತಾ, ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ ಎಂದು ಹೊಂಬಾಳೆ ಫಿಲ್ಮ್ಸ್ ಕೂಡಾ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಟ್ವೀಟ್ ಮಾಡಿ ತಿಳಿಸಿದೆ. ಇದನ್ನೂ ಓದಿ:  ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿರ್ದೇಶಕ ಮಂಸೋರೆ

ಸ್ಯಾಂಡಲ್‍ವುಡ್ ತಾರೆಯರು 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿಧವಿಧವಾಗಿ ಶುಭಾಶಯಗಳನ್ನು ಕೋರುತ್ತಿದ್ದಾರೆ. ಕೆಲವು ನಟರು ತಮ್ಮ ಹೊಸ ಸಿನಿಮಾದ ಪೋಸ್ಟರ್, ಟೀಸರ್ ಮುಖಾಂತರ ಶುಭಾಶಯಗಳನ್ನು ಕೋರಿದ್ದಾರೆ. ನಟ ಯಶ್ ವಿಶೇಷ ಸಂದೇಶದ ಮೂಲಕ ಶುಭಾಶಯವನ್ನು ಕೋರಿದ್ದು, ಎಲ್ಲರ ಗಮನ ಸೆಳೆದಿದೆ.

Source: publictv.in Source link