ಸ್ವಾತಂತ್ರ್ಯ ರಥಕ್ಕೆ ಅಡ್ಡಿ; ಮೂವರು SDPI ಕಾರ್ಯಕರ್ತರು ಪೊಲೀಸರ ವಶಕ್ಕೆ

ಸ್ವಾತಂತ್ರ್ಯ ರಥಕ್ಕೆ ಅಡ್ಡಿ; ಮೂವರು SDPI ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕಬಕ ಗ್ರಾಮದಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಪೋಟೋ ಬಳಕೆ ವಿಚಾರವಾಗಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಮೂರು ಮಂದಿ SDPI ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಬಕ ಗ್ರಾಮ ಪಂಚಾಯತ್ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಡೆಸಲಾಗುತ್ತಿತ್ತು. ಈ ವೇಳೆ ಸ್ವಾತಂತ್ರ್ಯ ರಥವನ್ನು ತಡೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು SDPI ಕಾರ್ಯಕರ್ತರನ್ನು ಚದುರಿಸಿದ್ದರು.

ಈಗ ಪೊಲೀಸರು ಪ್ರಕರಣದಲ್ಲಿ ಮೂವರು SDPI ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಕೆ. ಅಜೀಜ್​​​, ಶಮೀರ್​​, ಅಬ್ದುಲ್​​ ರೆಹಮಾನ್​​ ಎಂಬುವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಗ್ರಾಮ ಪಂಚಾಯತ್​​ ಅಧಿಕಾರಿ ಘಟನೆ ಸಂಬಂಧ ಐವರು SDPI ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದರು.

ಇದನ್ನೂ ಓದಿ: DGIGP & CM ಆದೇಶಕ್ಕೂ ಇಲ್ಲ ಕಿಮ್ಮತ್ತು? ಪೊಲೀಸರಿಂದಲೇ ಆದೇಶ ಉಲ್ಲಂಘಿಸಿ ಬರ್ತ್​​ಡೇ

Source: newsfirstlive.com Source link