ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ.. ಧಗಿಧಗಿಸಿ ಉರಿದ ಬೆಂಜ್ ಕಾರ್

ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ.. ಧಗಿಧಗಿಸಿ ಉರಿದ ಬೆಂಜ್ ಕಾರ್

ಶಿವಮೊಗ್ಗ: ಚಲಿಸುತ್ತಿದ್ದ ಬೆಂಜ್‌ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿರೋ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನಪೇಟೆ ಬೆಳ್ಳೂರಿನಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಈ ಘಟನೆ ನಡೆದಿದ್ದು ಬೆಳ್ಳೂರಿನ ಸಮೀಪವಿರುವ ಗುಳಿಗುಳಿ ಶಂಕರ ದೇವಾಲಯಕ್ಕೆ ದರ್ಶನಕ್ಕೆಂದು ತೆರಳುತ್ತಿದ್ದ ಕಾರಿಗೆ ಬೆಂಕಿ ಹೊತ್ತಿರುವುದಾಗಿ ತಿಳಿದು ಬಂದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸುರಕ್ಷಿತವಾಗಿದ್ದು ಯಾವುದೇ ಅಪಾಯವಿಲ್ಲವೆ ಕಾರಿನಿಂದ ಹೊರಬಂದಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇನ್ನು ಈ ಕಾರು ಶಿವಮೊಗ್ಗ ಮೂಲದ ಮುರುಳಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ರಿಪ್ಪನ್ ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: newsfirstlive.com Source link