ಹಿರಿಯ ನಿರ್ಮಾಪಕ ವಿಜಯ್ ಕುಮಾರ್ ನಿಧನ

ಬೆಂಗಳೂರು: ಹಿರಿಯ ನಿರ್ಮಾಪಕ, ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಬಿ. ವಿಜಯ್ ಕುಮಾರ್ ನಿಧನರಾಗಿದ್ದಾರೆ.

ಹೃದಯಾಘಾತ ಸಂಭವಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಗರ್ ಆಸ್ಪತ್ರೆಯಲ್ಲಿ ರಾತ್ರಿ 9:20ಕ್ಕೆ ಕೊನೆಯುಸಿರೆಳೆದಿದ್ದಾರೆ. ಇಂದು ಜಯನಗರದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ವಿಷ್ಣುವರ್ಧನ್ ಅವರಿಗೆ ಬಹಳ ಆಪ್ತರಾಗಿದ್ದ ವಿಜಯ್ ಕುಮಾರ್, ವಿಷ್ಣು ಅಭಿನಯಿಸಿದ ಸಾಕಷ್ಟು ಸಿನಿಮಾಗಳ ನಿರ್ಮಾಪಕರಾಗಿದ್ದರು. ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್. ಮೌನಗೀತೆ, ಜಗದೇಕ ವೀರ ಸೇರಿ ಹಲವು ಚಿತ್ರಗಳನ್ನ ನಿರ್ಮಿಸಿದ್ದರು. ಇದನ್ನೂ ಓದಿ: ತಪ್ಪು ಸರಿಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ: ರಚಿತಾ ರಾಮ್

ಸ್ವಚ್ಛ ಭಾರತ ಇವರ ನಿರ್ಮಾಣದ ಕೊನೆಯ ಚಿತ್ರವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ, ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Source: publictv.in Source link