ದ.ಕನ್ನಡದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಕರಿಛಾಯೆ -ಜಿಲ್ಲೆಯಲ್ಲಿ 60 ಕಂಟೈನ್ ಮೆಂಟ್ ಝೋನ್

ದ.ಕನ್ನಡದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಕರಿಛಾಯೆ -ಜಿಲ್ಲೆಯಲ್ಲಿ 60 ಕಂಟೈನ್ ಮೆಂಟ್ ಝೋನ್

ದಕ್ಷಿಣ ಕನ್ನಡ: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಬೆನ್ನಲ್ಲೇ ಇದೀಗ ರಾಜ್ಯದ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು ಕೂಡ ಜಿಲ್ಲೆಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ.

ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ನಿನ್ನೆ ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 311 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 3,609 ಕೊರೊನಾ ಆಕ್ಟಿವ್ ಪ್ರಕರಣಗಳು ಜಿಲ್ಲೆಯಲ್ಲಿವೆ..

blank

ಇದನ್ನೂ ಓದಿ: ಸ್ವಾತಂತ್ರ್ಯ ರಥಕ್ಕೆ ಅಡ್ಡಿ; ಮೂವರು SDPI ಕಾರ್ಯಕರ್ತರು ಪೊಲೀಸರ ವಶಕ್ಕೆ

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿರುವ 5 ಕ್ಕಿಂತ ಹೆಚ್ಚು ಪ್ರದೇಶಗಳನ್ನು ಕಂಟೈನ್ ಮೆಟ್ ಝೋನ್ ಆಗಿ ಪರಿವರ್ತಿಸಿರುವ ಜಿಲ್ಲಾಡಾಳಿತ, ಇದುವರೆಗೆ 60 ಕಂಟೈನ್ ಮೆಂಟ್ ಝೋನ್ ಗಳನ್ನು ಗುರುತಿಸಿದೆ.

ಈ ಕಂಟೈನ್ ಮೆಂಟ್ ಝೋನ್ ನಲ್ಲಿರುವ ಕೊರೊನಾ ಸೋಂಕಿತರ ಮೇಲೆ ಮತ್ತಷ್ಟು ನಿಗಾ ಇರಿಸಿರುವ ಜಿಲ್ಲಾಡಾಳಿತ, ಸೋಂಕಿನ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವದಾಗಿ ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link