3.5 ಕೋಟಿ ಜನರಿಗೆ ಸ್ಮಾರ್ಟ್ ಹೆಲ್ತ್ ಕಾರ್ಡ್ ಘೋಷಿಸಿದ ಒಡಿಶಾ ಸಿಎಂ

ಭುವನೇಶ್ವರ: 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭಾನುವಾರ ಬಿಜು ಸ್ವಾಸ್ಥ್ಯ ಕಲ್ಯಾಣ ಯೋಜನೆಯಡಿ ರಾಜ್ಯದ 3.5 ಕೋಟಿ ಜನರಿಗೆ ಸ್ಮಾರ್ಟ್ ಹೆಲ್ತ್ ಕಾರ್ಡ್ ನೀಡುವುದಾಗಿ ಘೋಷಿಸಿದ್ದಾರೆ.

ಈ ಯೋಜನೆಯು ಆರೋಗ್ಯ ಸೇವಾ ವಿತರಣಾ ವ್ಯವಸ್ಥೆಯನ್ನು ಪರಿವರ್ತಿಸುತ್ತದೆ ಮತ್ತು ದೇಶದ ಆರೋಗ್ಯ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸುವುದರ ಜೊತೆಗೆ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದಿದ್ದಾರೆ. ಇಡೀ ಒಡಿಶಾದ ಎಲ್ಲಾ ಜನರು ನನ್ನ ಕುಟುಂಬ. ಜನರು ಜಮೀನನ್ನು, ಆಭರಣಗಳನ್ನು ಮಾರುವುದರ ಜೊತೆಗೆ ಚಿಕಿತ್ಸಾ ವೆಚ್ಚವನ್ನು ಭರಿಸಲು ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ನಿಲ್ಲಿಸಿರುವ ವಿಚಾರ ನನಗೆ ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಅಫ್ಘಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ, ಉಪಾಧ್ಯಕ್ಷ ಸಾಲೇಹ

ನಂತರ ಜನರನ್ನು ಕಷ್ಟದಿಂದ ಪಾರು ಮಾಡಲು ನಾನು ನಿರ್ಧರಿಸಿದೆ. ಹೀಗಾಗಿ ಜನರು ಲಭ್ಯವಾಗುತ್ತಿರುವ ಉತ್ತಮ ಆರೋಗ್ಯ ಸೌಲಭ್ಯವನ್ನು ಉಚಿತವಾಗಿ ಪಡೆಯಬಹುದು. ಬಿಜು ಸ್ವಾಸ್ಥ್ಯ ಯೋಜನೆಯಡಿ ನಿರ್ದಿಷ್ಟ ಮೊತ್ತಕ್ಕೆ ಡೆಬಿಟ್ ಕಾರ್ಡ್‍ಗಳಾಗಿ ಕಾರ್ಯನಿರ್ವಹಿಸುವ ಸ್ಮಾರ್ಟ್ ಹೆಲ್ತ್ ಕಾರ್ಡ್‍ಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ:ಮುನಿಸು ಶಮನವಾದರೂ ಜಮೀರ್ ಆಹ್ವಾನ ಒಪ್ಪದ ಸಿದ್ದರಾಮಯ್ಯ

Source: publictv.in Source link