ಪುಸ್ತಕ ನೀಡಿ ಉಪರಾಷ್ಟ್ರಪತಿಗಳನ್ನ ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳಾದ ವೆಂಕಯ್ಯನಾಯ್ಡು ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಸ್ತಕ ನೀಡಿ ಸ್ವಾಗತ ಕೋರಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರರನ್ನ ಸಿಎಂ ಸಂಭ್ರಮದಿಂದ ಸ್ವಾಗತಿಸಿದರು. ವಿಮಾನದ ಬಳಿಯೇ ತೆರಳಿದ ಸಿಎಂ ಬೊಮ್ಮಾಯಿವರು ವಿಶೇಷ ಹಾರ, ಶಾಲು ಸೇರಿದಂತೆ ಪುಸ್ತಕ ನೀಡಿ ಬರ ಮಾಡಿಕೊಂಡರು. ಇನ್ನೂ ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪರಾಷ್ಟ್ರಪತಿಗಳನ್ನ ಸ್ವಾಗತಿಸಿದರು. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

ಸಚಿವರಾದ ಅಶ್ವತ್ಥನಾರಾಯಣ್, ಸಂಸದ ಪಿ.ಸಿ.ಮೋಹನ್ ಸಹ ಆಗಮಿಸಿದ್ರು. ಮತ್ತೊಂದೆಡೆ ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಭಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ಉಪರಾಷ್ಟ್ರಪತಿಗಳು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾಲಜ್ಞಾನಿಯಲ್ಲ, ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ: ಸಿ.ಟಿ.ರವಿ ವ್ಯಂಗ್ಯ

Source: publictv.in Source link