ಲವ್ ಮಾಡಲ್ಲ ಎಂದ ಯುವತಿಯನ್ನ ನಡುರಸ್ತೆಯಲ್ಲೇ ಕತ್ತು ಸೀಳಿ ಕೊಲೆಗೈದ ಯುವಕ

ಲವ್ ಮಾಡಲ್ಲ ಎಂದ ಯುವತಿಯನ್ನ ನಡುರಸ್ತೆಯಲ್ಲೇ ಕತ್ತು ಸೀಳಿ ಕೊಲೆಗೈದ ಯುವಕ

ಗುಂಟೂರು: ಮೂರನೇ ವರ್ಷದ ಬಿ.ಟೆಕ್​ ಶಿಕ್ಷಣವನ್ನು ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

ರಮ್ಯಾಶ್ರೀ ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಹೊಟ್ಟೆ ಭಾಗ ಹಾಗೂ ಕುತ್ತಿಗೆ ಭಾಗಕ್ಕೆ 6ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶಶಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.

blank

ಘಟನೆ ನಡೆಯುವ ಮುನ್ನ ವಿದ್ಯಾರ್ಥಿನಿಯೊಂದಿಗೆ ಆರೋಪಿ ಕೆಲ ಸಮಯ ಮಾತುಕತೆ ನಡೆಸಿದ್ದ. ಆದರೆ ಆ ಬಳಿಕ ಏಕಾಏಕಿ ಆಕೆಯ ಮೇಲೆ ಚೂರಿಯಿಂದ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆ ದಾಖಲು ಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಅಧಿಕ ರಕ್ತಸ್ರಾವದಿಂದ ಯುವತಿ ಸಾವನ್ನಪ್ಪಿದ್ದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ.

ಘಟನೆ ನಡೆದ ಕೂಡಲೇ ಆಂಧ್ರ ಪ್ರದೇಶ ಗೃಹ ಸಚಿವ ಆಸ್ಪತ್ರೆಗೆ ಭೇಟಿ ನೀಡಿ ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವನ ಹೇಳಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ. ಸಿಎಂ ಜಗನ್​ ಮೋಹನ್ ರೆಡ್ಡಿ ಕೂಡ ಘಟನೆ ಕುರಿತಂತೆ ಟ್ವೀಟ್​ ಮಾಡಿ, ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾಗಿ ತಿಳಿಸಿದ್ದು, ಸರ್ಕಾರ ಮೃತ ವಿದ್ಯಾರ್ಥಿನಿಯ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಯುವತಿಗೆ ಇನ್​​ಸ್ಟಾದಲ್ಲಿ ಪರಿಚಯವಾದ ಶಶಿ, ತನ್ನನ್ನು ಲವ್​​ ಮಾಡುವಂತೆ ಆಕೆಗೆ ಒತ್ತಾಯ ಮಾಡುತ್ತಿದ್ದ. ಆದರೆ ಯುವತಿ ಇದನ್ನು ನಿರಾಕರಿಸಿ ಆತನಿಂದ ದೂರ ಉಳಿಯಲು ಪ್ರತ್ನಿಸಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆರೋಪಿಯ ಯುವತಿಯನ್ನು ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ ಎಂದು ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

Source: newsfirstlive.com Source link