ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ -ಸಚಿವೆ ಶೋಭಾ ಕರಂದ್ಲಾಜೆ

ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ -ಸಚಿವೆ ಶೋಭಾ ಕರಂದ್ಲಾಜೆ

ಚಾಮರಾಜನಗರ: ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ಕೃಷಿ ಕಾಯ್ದೆಗಳನ್ನು ವಿರೋಧಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲ. ಅಲ್ಲಿರುವವರೆಲ್ಲಾ ಪಂಜಾಬ್​​, ಹರಿಯಾಣದ ಮಧ್ಯವರ್ತಿಗಳು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜನಶೀರ್ವಾದ ಯಾತ್ರೆಯ ಅಂಗವಾಗಿ ಚಾಮರಾಜನಗರದಲ್ಲಿ ಸಭೆ ನಡೆಸಿ ಕೃಷಿ ಇಲಾಖೆಯಲ್ಲಿನ ಜನಪರ ಯೋಜನೆಗಳು, ರೈತರ ಕಲ್ಯಾಣಕ್ಕಾಗಿ ಕೈಗೊಂಡ ನಿರ್ಧಾರಗಳ ಕುರಿತು ಜನರಿಗೆ ಮಾಹಿತಿ ನೀಡಿದರು. ಆ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರೆಲ್ಲ ಮಧ್ಯವರ್ತಿಗಳು. ಎಪಿಎಂಸಿ ಲಾಭಿಯ ಮದ್ಯವರ್ತಿಗಳು ಪ್ರತಿಭಟಿಸುತ್ತಿದ್ದಾರೆ. ಎಪಿಎಂಸಿಗಳಲ್ಲಿ ಯಾರಿಗೆ ಲಾಭ ಸಿಗುತ್ತಿತ್ತೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಪಂಜಾಬ್ ಮತ್ತು ಹರಿಯಾಣ ರಾಜ್ಯ ಗಳಲ್ಲಿ ಹೆಚ್ಚು ಕಮಿಷನ್ ಹೊಡೆಯುತ್ತಿದ್ದವರು ಹೋರಾಟ ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತ. ಪ್ರತಿಭಟನೆ ಮಾಡುತ್ತಿರುವವರು ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

Source: newsfirstlive.com Source link