ಅಫ್ಘಾನ್‍ನಲ್ಲಿ ಸಿಲುಕಿರುವ 120 ಮಂದಿ ಭಾರತೀಯರು ಒಂದೆರಡು ದಿನಗಳಲ್ಲಿ ರಿಟರ್ನ್

ನವದೆಹಲಿ: ಅಫ್ಘಾನಿಸ್ತಾನದ ವಿವಿಧ ಭಾಗಗಳಲ್ಲಿ ಸಿಲುಕಿರುವ ಸುಮಾರು 120 ಮಂದಿ ಭಾರತೀಯರನ್ನು ಒಂದು ಅಥವಾ ಎರಡು ದಿನಗಳಲ್ಲಿ ಭಾರತೀಯ ವಾಯುಪಡೆಯು ವಿಮಾನದ ಮೂಲಕ ಸ್ವದೇಶಕ್ಕೆ ಕರೆತರಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದೆ.

ಸೋಮವಾರ ಸಂಜೆ ಭಾರತೀಯ ವಾಯುಪಡೆಯು 46 ಸಿಬ್ಬಂದಿ ಹಾಗೂ ಕೆಲವು ಸಲಕರಣೆಗಳನ್ನು ವಿಮಾನದ ಮೂಲಕ ಕಾಬೂಲ್‍ನಿಂದ ಭಾರತಕ್ಕೆ ಮರಳಿದೆ. ಅಲ್ಲದೇ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಂಟಾದ ಅವ್ಯವಸ್ಥೆಯಿಂದಾಗಿ ಬೆಳಗ್ಗೆ ವಿಮಾನವು ತಜಕಿಸ್ತಾನದಲ್ಲಿ ಇಳಿಯಿತು. ಮೂಲಗಳ ಪ್ರಕಾರ ಸುಮಾರು 200 ಭಾರತೀಯ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ.  ಇದನ್ನೂ ಓದಿ:ಅಫ್ಘಾನ್ ಸೇನೆ ಹೋರಾಟ ಮಾಡದೇ ಇರುವಾಗ ನಮ್ಮವರು ಬಲಿಯಾಗುವುದರಲ್ಲಿ ಅರ್ಥವಿಲ್ಲ : ಬೈಡನ್

ಭಾರತದ ವಿದೇಶಾಂಗ ವ್ಯವಹಾರ ಸಚಿವಾಲಯ ಸೋಮವಾರ ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಸುದ್ದಿಗೋಷ್ಟಿ ನಡೆಸಿದ್ದು, ಭಾರತ ಸರ್ಕಾರ ಅಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ.

ವಕ್ತಾರ ಅರಿಂದಮ್ ಬಾಗ್ಚಿ, ಕಳೆದ ಕೆಲವು ದಿನಗಳಲ್ಲಿ ಕಾಬೂಲ್‍ನಲ್ಲಿ ಭದ್ರತಾ ಪರಿಸ್ಥಿತಿ ತೀರ ಹದಗೆಟ್ಟಿದೆ ಎಂದಿದ್ದಾರೆ. ಅಫ್ಘಾನಿಸ್ತಾನದಲ್ಲಿ ಇನ್ನೂ ಕೆಲವು ಭಾರತೀಯರು ಸಿಲುಕಿಕೊಂಡಿದ್ದು, ಹಿಂದಿರುಗಲು ಬಯಸುತ್ತಿದ್ದು, ಅವರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.  ಇದನ್ನೂ ಓದಿ:ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

Source: publictv.in Source link