ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ಆದೇಶ -ಡಾ.ಅಶ್ವಥ್ ನಾರಾಯಣ್​ಗೆ ಶಾಕ್

ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ಆದೇಶ -ಡಾ.ಅಶ್ವಥ್ ನಾರಾಯಣ್​ಗೆ ಶಾಕ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸರ್ಕಾರಿ ನಿವಾಸವನ್ನ ಹಂಚಿಕೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಸೂಳಿಕೇರಿ ಆದೇಶ ಹೊರಡಿಸಿದ್ದಾರೆ.

ರೇಸ್‌ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ವಸತಿ ಸಂಖ್ಯೆ ನಂಬರ್ 1 ನಿವಾಸವನ್ನ ಸಿಎಂ ಬೊಮ್ಮಾಯಿ ಅವರಿಗೆ ನೀಡಲಾಗಿದೆ. ಸದ್ಯ ಈ ನಿವಾಸದಲ್ಲಿ ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ್ ಇದ್ದಾರೆ.

ಸಿಎಂ ಅವರಿಗೆ ನಿವಾಸ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಡಾ.ಅಶ್ವಥ್​ ನಾರಾಯಣ್ ಅವರು ಈ ನಿವಾಸವನ್ನ ಮುಖ್ಯಮಂತ್ರಿಗಳಿಗೆ ಸದ್ಯದಲ್ಲೇ ಬಿಟ್ಟುಕೊಡಲಿದ್ದಾರೆ.

blank

Source: newsfirstlive.com Source link