ಆಫ್ಘಾನ್​ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ -ಕೇಂದ್ರ ಸಚಿವ ಜೋಶಿ ಭರವಸೆ

ಆಫ್ಘಾನ್​ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ -ಕೇಂದ್ರ ಸಚಿವ ಜೋಶಿ ಭರವಸೆ

ಹುಬ್ಬಳ್ಳಿ: ಅಫ್ಘಾನಿಸ್ತಾದಲ್ಲಿನ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಅಲ್ಲಿಯ ಭಾರತೀಯ ನಿವಾಸಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಭಾರತೀಯರನ್ನ ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಜೈ ಶಂಕರ್​ ಅವರ ನೇತೃತ್ವದಲ್ಲಿ ನಾವು ಭಾರತೀಯರ ರಕ್ಷಣೆಯ ಪ್ರಯತ್ನದಲ್ಲಿದ್ದೇವೆ. ಅಲ್ಲಿಯ ಜನರ ಜೀವನ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಭಾರತೀಯನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ಆದೇಶ -ಡಾ.ಅಶ್ವಥ್ ನಾರಾಯಣ್​ಗೆ ಶಾಕ್

ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಕುರಿತು ಮಾತನಾಡಿದ ಅವರು.. ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗುವುದು ಎಂದಿದ್ದಾರೆ. ವಾರ್ಡ್ ಅಧ್ಯಕ್ಷರ ಮೂಲಕ ಬರುವ ಆಕಾಂಕ್ಷಿಗಳ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಆಕಾಂಕ್ಷಿಗಳು ಇಂದು ಸಂಜೆಯೊಳಗೆ ಅರ್ಜಿಗಳನ್ನು ವಾರ್ಡ್ ಅಧ್ಯಕ್ಷರಿಗೆ ಸಲ್ಲಿಸಬೇಕು. ನಾಡಿದ್ದು, ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದಿದ್ದಾರೆ.

Source: newsfirstlive.com Source link