ಜಮ್ಮ-ಕಾಶ್ಮೀರದಲ್ಲಿ ಬಿಜೆಪಿ ನಾಯಕನ ಮೇಲೆ ಗುಂಡಿಟ್ಟು ಹತ್ಯೆಗೈದ ಉಗ್ರರು

ಜಮ್ಮ-ಕಾಶ್ಮೀರದಲ್ಲಿ ಬಿಜೆಪಿ ನಾಯಕನ ಮೇಲೆ ಗುಂಡಿಟ್ಟು ಹತ್ಯೆಗೈದ ಉಗ್ರರು

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ನಾಯಕರ ಮೇಲೆ ಉಗ್ರರ ಟಾರ್ಗೆಟ್ ಮುಂದುವರಿದಿದೆ. ಇಂದು ಮತ್ತೊಬ್ಬ ಬಿಜೆಪಿ ನಾಯಕನ ಮೇಲೆ ಫೈರಿಂಗ್ ನಡೆಸಿ ಹತ್ಯೆ ಮಾಡಿದ್ದಾರೆ.

ಜಾವೀದ್ ಅಹಮ್ಮದ್ ದರ್​​ ಮೃತ ಬಿಜೆಪಿ ನಾಯಕ. ಕುಲ್ಗಮ್ ಜಿಲ್ಲೆಯ ಹೊಮ್​ಶಲಿಬಗ್​​​​ ಕ್ಷೇತ್ರವನ್ನ ಪ್ರತಿನಿಧಿಸುತ್ತಿದ್ದ ಇವರನ್ನ ಬ್ರಜಲೋ-ಜಗೀರ್​ ಎಂಬಲ್ಲಿ ಅಟ್ಯಾಕ್ ಮಾಡಿದ್ದಾರೆ. ಮನಬಂದಂತೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಗ್ರೆನೇಡ್ ದಾಳಿ: 4 ವರ್ಷದ ಕಂದಮ್ಮ ಸಾವು, 7 ಮಂದಿಗೆ ಗಾಯ

ಕೂಡಲೇ ಅವರನ್ನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರೊಳಗೆ ಉಗ್ರರ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಉಗ್ರರ ಪೈಶಾಚಿಕ ಕೃತ್ಯವನ್ನ ಬಿಜೆಪಿ ಖಂಡಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕರೇ ಟಾರ್ಗೆಟ್.. ಆತ್ಮಾಹುತಿ ಬಾಂಬ್ ದಾಳಿ ಮೂಲಕ ಯುಪಿನಲ್ಲಿ ಸರಣಿ ಸ್ಫೋಟಕ್ಕೆ ಸ್ಕೆಚ್

Source: newsfirstlive.com Source link